ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್[BEL] ನೇಮಕಾತಿ 2023 ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ .

ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್[BEL]

ಪ್ರಮುಖ ವಿವರಗಳು :

ವಿಧ : ಸರ್ಕಾರಿ ಉದ್ಯೋಗಗಳು
ಹುದ್ದೆಯ ಹೆಸರು : ಟ್ರೈನಿ ಇಂಜಿನಿಯರ್ , ಪ್ರಾಜೆಕ್ಟ್ ಇಂಜಿನಿಯರ್
ಒಟ್ಟು ಖಾಲಿ ಹುದ್ದೆಗಳು : 205
ಸ್ಥಳ : ಭಾರತಾದ್ಯಂತ [ All over India]
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್

ಖಾಲಿ ಹುದ್ದೆಗಳ ವಿವರಗಳು :

  • ಟ್ರೈನಿ ಇಂಜಿನಿಯರ್ -1
  • ಪ್ರಾಜೆಕ್ಟ್ ಇಂಜಿನಿಯರ್ -1

ಶೈಕ್ಷಣಿಕ ಅರ್ಹತೆ :

  • ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 4 ವರ್ಷಗಳ ಪೂರ್ಣಾವಧಿ ಬಿ.ಎಸ್ಸಿ (ಇಂಜಿನಿಯರಿಂಗ್)/ ಬಿ.ಇ/ ಬಿ.ಟೆಕ್ ಇಂಜಿನಿಯರಿಂಗ್ ಕೋರ್ಸ್ ಅನ್ನು ಇನ್ಫಾರ್ಮೆಷನ ಟೆಕ್ನಾಲಜಿ/ ಇನ್ಫಾರ್ಮೆಷನ ಸೈನ್ಸ್/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್/ ಇನ್ಸ್ಟ್ರುಮೆಂಟೇಶನ್/ ಇಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್ ನಲ್ಲಿ ಹೊಂದಿರಬೇಕು.
  • ಅಭ್ಯರ್ಥಿಗಳು ಆಯಾ ಹುದ್ದೆಗೆ ಇಲಾಖೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ :

ದಿನಾಂಕ 01/06/2023ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಾನ ಮೀರಿರಬಾರದು.

  • ಟ್ರೈನಿ ಇಂಜಿನಿಯರ್-1 – ಗರಿಷ್ಠ 28 ವರ್ಷ
  • ಪ್ರಾಜೆಕ್ಟ್ ಇಂಜಿನಿಯರ್-1 – ಗರಿಷ್ಠ 32 ವರ್ಷ

ವೇತನ ಶ್ರೇಣಿಯ ವಿವರಗಳು :

  • ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್[BEL] ನಿಯಮದ ಪ್ರಕಾರ.

ಅರ್ಜಿ ಶುಲ್ಕ :

  • ಟ್ರೈನಿ ಇಂಜಿನಿಯರ್ – ರೂ. 177
  • ಪ್ರಾಜೆಕ್ಟ್ ಇಂಜಿನಿಯರ್ – ರೂ. 472
  • (ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ)
  • ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು SBI Collect ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ :

  • ಲಿಖಿತ ಪರೀಕ್ಷೆ [Writte test]
  • ಸಂದರ್ಶನ [Interview]

ಅರ್ಜಿ ಸಲ್ಲಿಸುವುದು ಹೇಗೆ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
  • ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ
  • ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2023

Leave a Reply