ಕರ್ನಾಟಕ ಹೈಕೋರ್ಟ್ ನೇಮಕಾತಿ 2023 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ | ಆನ್ಲೈನ್ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಸಂಸ್ಥೆ : ಕರ್ನಾಟಕ ಹೈಕೋರ್ಟ್

ಪ್ರಮುಖ ವಿವರಗಳು :

ವಿಧ :ರಾಜ್ಯ ಸರ್ಕಾರದ ಹುದ್ದೆಗಳು
ಹುದ್ದೆಯ ಹೆಸರು :ಕೇಬಲ್ ಆಪರೇಟರ್ (ಗ್ರೂಪ್-ಡಿ)
ಒಟ್ಟು ಖಾಲಿ ಹುದ್ದೆಗಳು :01
ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ :ಆನ್ಲೈನ್

ಖಾಲಿ ಹುದ್ದೆಗಳ ವಿವರಗಳು :

  1. ಕೇಬಲ್ ಆಪರೇಟರ್ (ಗ್ರೂಪ್-ಡಿ)

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ಅದಕ್ಕೆ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಐ.ಟಿ.ಐ (ಎಲೆಕ್ಟ್ರಾನಿಕ್ಸ್/ ಎಲೆಕ್ಟಿಕಲ್/ ಐಟಿ ಯನ್ನು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಹೊಂದಿರಬೇಕು).
ಅಭ್ಯರ್ಥಿಗಳು ನೆಟ್‌ವರ್ಕ್ ನಿರ್ವಹಣೆ, VLAN, Switch, Router, Modem Configuration ಮತ್ತು LAN ಕೆಲಸದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದ್ದಂತೆ ಅನುಭವ ಹೊಂದಿರಬೇಕು.
ಮತ್ತು
CCNA/CCNP ಪ್ರಧಾನ ಮಾಡುವ ಪ್ರಮಾಣಪತ್ರವನ್ನು ಮಾನ್ಯತೆ ಪಡೆದ ಮತ್ತು ಪ್ರತಿಷ್ಠಿತ ಸಂಸ್ಥೆಯಿಂದ ಹೊಂದಿರತಕ್ಕವರು ಅಪೇಕ್ಷಣೀಯ.

ವಯಸ್ಸಿನ ಮಿತಿ :

  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- ಗರಿಷ್ಠ 40 ವರ್ಷ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ.

ವೇತನ ಶ್ರೇಣಿಯ ವಿವರಗಳು :

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 – ರೂ. 63,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಹಾಗೂ ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು – ರೂ. 100
    • ಉಳಿದ ಅಭ್ಯರ್ಥಿಗಳು – ರೂ.200

ಆಯ್ಕೆ ಪ್ರಕ್ರಿಯೆ :

  1. ನೇರ ನೇಮಕಾತಿ, ಸಂದರ್ಶನದ ಮೂಲಕ, ಅರ್ಹತೆಗಳು ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ :

  • ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
    1 ಅರ್ಜಿ ಸಲ್ಲಿಸುವ ಮೊದಲು ಉಚ್ಛ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
    2 : ಉಚ್ಛ ನ್ಯಾಯಾಲಯದ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
    3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
    4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
    5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಪ್ರಮುಖ ಸೂಚನೆಗಳು:

ಅಭ್ಯರ್ಥಿಗಳು ತಮ್ಮ ಸ್ವ ಹಿತಾಸಕ್ತಿ ಇಂದ ಅರ್ಜಿ ಸಲ್ಲಿಸಲು ಸಲಹೆ ನೀಡಲಾಗುತ್ತದೆ ಅರ್ಜಿಯಲ್ಲಿ ಸಲ್ಲಿಸಿದ ಮೊದಲ ನೀಡಲಾದ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಲು ಸೂಚಿಸಲಾಗುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :16-06-2೦23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :17-07-2೦23

Leave a Reply