20,000/- ರೂ ಉಚಿತ ವಿದ್ಯಾರ್ಥಿವೇತನ..! ಇಂದೇ ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರವು ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಅವರ ಶಿಕ್ಷಣಕ್ಕೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಪ್ರೋತ್ಸಾಹ ಧನದ ರೂಪ ದಲ್ಲಿ ಈ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. 

ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ [Labour card scholarship] 2024 ರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ : 

ಸರ್ಕಾರವು ವಿದ್ಯಾರ್ಥಿಗಳಿಗೆ ರೂ 6,000 ರಿಂದ ರೂ 20,000/- ವರೆಗೂ ಶೈಕ್ಷಣಿಕ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರೌಡಶಾಲೆ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್, ಮೆಡಿಕಲ್ ಓಧುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಸoಘಟಿತ ಕಾರ್ಮಿಕರ ಮಕ್ಕಳು 2023-2024 ನೇ ಸಾಲಿನ ಈ ವಿದ್ಯಾರ್ಥಿವೇತನ ಪಡೆಯಲು ಆನ್ ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಕಾರ್ಮಿಕರ ತಿಂಗಳ ವೇತನ ರೂ. 35,000/- ಕಿಂತ ಹೆಚ್ಚಿರಬಾರದು.ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆ ಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ಘೋಷಿಸಿದೆ. 

ಶೈಕ್ಷಣಿಕ ಪ್ರೋತ್ಸಾಹ ಧನವನ್ನು ಪಡೆಯಬೇಕೆಂಬ ವಿದ್ಯಾರ್ಥಿಯು ಆನ್ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ವಿದ್ಯಾರ್ಥಿವೇತನ ಪಡೆಯಲು ಇರಬೇಕಾದ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದi ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 

ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿ ಗೆ ಚಂದಾ ಪಾವತಿ ಮಾಡುವ ಸಂಘಟಿತ ಕಾರ್ಮಿಕರ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಥಿಗಳು ಹಿಂದಿನ ತರರಗತಿ ಅಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇಕಡ 50 ಅಂಕಗಳನ್ನು ಹಾಗು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶೇಕಡ 45 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. 

ಈ ವಿದ್ಯಾರ್ಥಿವೇತನಕ್ಕೆ ನೀಡಲಾದ ಮೊತ್ತದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ : 

  • ವಿವಿಧ ತರಗತಿಗಳಲ್ಲಿ ಓಧುತ್ತಿರುವ ವಿದ್ಯಾರ್ಥಿಗಳಿಗೆ ಈ ಕೆಳಗಿರುವಂತೆ ಶೈಕ್ಷಣಿಕ ಸಹಾಯ ಧನವನ್ನು ನೀಡಲಾಗುತ್ತದೆ . 
  • 8 ನೇ ತರಗತಿ ಇಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 6,000 ರೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. 
  • ಪಿಯುಸಿ, ಡಿಪ್ಲೊಮಾ, ಐಟಿಐ, ಟಿಸಿಎಚ್ ಇತ್ಯಾದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 8,000 ರೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. 
  • ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10,000 ರೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.
  • ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. 
  • ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 20,000 ರೂ  ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. 

31 ಜನವರಿ 2024 ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ 48 , 1 ನೇ ಮತ್ತು 2 ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು – 560022 ಈ ವಿಳಾಸಕ್ಕೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 0808 23475188, 8277291175, 8277120505, 9141585402, 9141602562 ಕರೆ ಮಾಡಿ ಸಂಪರ್ಕಿಸಬಹುದು.

Leave a Reply