ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಇಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 10 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಶಿಕ್ಷಣ ಅರ್ಹತಾ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ, ಆಯ್ಕೆಯ ವಿಧಾನ, ಶುಲ್ಕ ವಿವರಗಳು ಮತ್ತು ಹೇಗೆ ಅರ್ಜಿಸಲ್ಲಿಸಬೇಕು ಎಂಬಂತಹ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.

ಒಟ್ಟು ಹುದ್ದೆಗಳು: 280
ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:
– ದಿನಾಂಕ ಜೂನ್‌ 10, 2021 ಕ್ಕೆ ಅನ್ವಯಿಸುವಂತೆ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ : 40,000 /- ದಿಂದ 1,40,000 /- ರವರೆಗೆ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು GATE-2021 ಪರೀಕ್ಷೆ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಪ್ರಮುಖ ಸೂಚನೆಗಳು :

• ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಮೇ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಜೂನ್ 2021

ವೆಬ್ಸೈಟ್

ಅಧಿಸೂಚನೆ

Leave a Reply