ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ [RDWSD] ನೇಮಕಾತಿ 2023 ಸಂಯೋಜಿತ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ | ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.
ಸಂಸ್ಥೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ [RDWSD]
ಪ್ರಮುಖ ವಿವರಗಳು :
ವಿಧ : | ಸರ್ಕಾರಿ ಉದ್ಯೋಗ |
ಹುದ್ದೆಯ ಹೆಸರು : | ಸಂಯೋಜಿತ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ |
ಒಟ್ಟು ಖಾಲಿ ಹುದ್ದೆಗಳು : | 01 |
ಸ್ಥಳ : | ಬೆಂಗಳೂರು |
ಅರ್ಜಿ ಸಲ್ಲಿಸುವ ವಿಧಾನ : | ಆಫ್ಲೈನ್ |
ಖಾಲಿ ಹುದ್ದೆಗಳ ವಿವರಗಳು :
- ಸಂಯೋಜಿತ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ [Integrated water resource management consultant]
ಅಭ್ಯರ್ಥಿಗಳನ್ನು ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
ಶೈಕ್ಷಣಿಕ ಅರ್ಹತೆ :
- ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್/ ಸಿವಿಲ್ ಇಂಜಿನಿಯರಿಂಗ್/ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ನಲ್ಲಿ ಹೊಂದಿರಬೇಕು. ಜೊತೆಗೆ ರೂರಲ್ ವಾಟರ್ & ಸ್ಯಾನಿಟೇಷನ್ ಪ್ರೋಗ್ರಾಮ್ಮ್ಸ್ ನಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
ವಯಸ್ಸಿನ ಮಿತಿ :
- ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ವೇತನ ಶ್ರೇಣಿಯ ವಿವರಗಳು :
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ರಿಂದ 70,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
- ಸಂದರ್ಶನ [Interview]
(ಸಂದರ್ಶನವನ್ನು ಕೇಂದ್ರ ಕಛೇರಿಯಲ್ಲಿ ನೇರ ಸಂದರ್ಶನ ಅಥವಾ ವಿಡಿಯೋ ಸಂವಾದದ ಮೂಲಕ ನಡೆಸಲಾಗುತ್ತದೆ)
ಅರ್ಜಿ ಸಲ್ಲಿಸುವುದು ಹೇಗೆ :
ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
- ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
- ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
- ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ ಅವುಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು – 5600-009
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : | 14-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : | 30-06-2023 |