ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಬೃಹತ್ ನೇಮಕಾತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ, ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ 5000 ಜೂನಿಯರ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಕರೆ ನೀಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಶಿಕ್ಷಣ ಅರ್ಹತಾ ವಿವರಗಳು, ಅಗತ್ಯವಿರುವ ವಯಸ್ಸಿನ ಮಿತಿ, ಆಯ್ಕೆಯ ವಿಧಾನ, ಶುಲ್ಕ ವಿವರಗಳು ಮತ್ತು ಹೇಗೆ ಅರ್ಜಿಸಲ್ಲಿಸಬೇಕು ಎಂಬಂತಹ ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಸ್ಥಳ : ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 5000 ಖಾಲಿ ಹುದ್ದೆಗಳು. (ಕರ್ನಾಟಕ 400 ಹುದ್ದೆಗಳು)
ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್(SBI Junior Associate)
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಯಾವುದೇ ಪದವಿ ಮುಗಿಸಿದ ಅಭ್ಯರ್ಥಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇದೆ.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 20 ವಯಸ್ಸು ಮೀರಿರಬಾರದು
ವಯೋಸಡಿಲಿಕೆ :
ಎಸ್ಸಿ ಎಸ್ಟಿ 05 ಅಭ್ಯರ್ಥಿಗಳಿಗೆ ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಶುಲ್ಕ :
ಸಾಮಾನ್ಯ,ಒಬಿಸಿ,EWS ಅಭ್ಯರ್ಥಿಗಳಿಗೆ ರೂ 750/-
ಇತರೆ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ವಿಧಾನ : ಅಭ್ಯರ್ಥಿಗಳಿಗೆ 2 ಹಂತದ ಪರೀಕ್ಷೆ ನಡೆಸಲಾಗುತ್ತದೆ. ಪೂರ್ವಭಾವಿ ಪರೀಕ್ಷೆ (Preliminary Examination) ಮತ್ತು ಮುಖ್ಯ ಪರೀಕ್ಷೆ (Mains Examination)
ಪ್ರಮುಖ ಸೂಚನೆಗಳು :
• ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-05-2021