ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2023 – 676 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ | ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಯ 8 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.

ಸಂಸ್ಥೆ : ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರ

ಪ್ರಮುಖ ವಿವರಗಳು :

ವಿಧ : ಸರ್ಕಾರಿ ಉದ್ಯೋಗಗಳು
ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು
ಒಟ್ಟು ಖಾಲಿ ಹುದ್ದೆಗಳು : 676
ಸ್ಥಳ : ಬೆಳಗಾವಿ ಜಿಲ್ಲೆಯ ಅರಭಾವಿ, ಗೋಕಾಕ್, ಬೈಲಹೊಂಗಲ, ಕಾಗವಾಡ, ಚಿಕ್ಕೋಡಿ, ರಾಯಭಾಗ, ಅಥಣಿ ಹಾಗೂ ಖಾನಾಪುರ
ಅರ್ಜಿ ಸಲ್ಲಿಸುವ ವಿಧಾನ : ಆಫ್ಲೈನ್

ಖಾಲಿ ಹುದ್ದೆಗಳ ವಿವರಗಳು :

  • ಅಂಗನವಾಡಿ ಕಾರ್ಯಕರ್ತೆಯರು – 200
  • ಅಂಗನವಾಡಿ ಸಹಾಯಕಿಯರು – 476

ಶೈಕ್ಷಣಿಕ ಅರ್ಹತೆ :

1] ಅಂಗನವಾಡಿ ಕಾರ್ಯಕರ್ತೆಯರು :

  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
2] ಅಂಗನವಾಡಿ ಸಹಾಯಕಿಯರು :
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು.

ವಯಸ್ಸಿನ ಮಿತಿ :

  • ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :

  • ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ :

ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

  • ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
  • ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
  • ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
  • ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

  • ಹುದ್ದೆ ಖಾಲಿ ಇರುವ ಬೆಳಗಾವಿ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು. (ಹೆಚ್ಚಿನ ಮಾಹಿತಿ ಪ್ರಕಟಣೆಯಲ್ಲಿ ನೀಡಲಾಗಿದೆ):

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-07-2023

Leave a Reply